Ad Widget .

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್,
ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟೀಟ್‍ಮೆಂಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

Ad Widget . Ad Widget .

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್‍ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಪ್ರಕರಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದಲ್ಲಿ ಹುರುಳಿದೆ. ಬಂಧನದ ಕ್ರಮವೂ ಕಾನೂನು ಪ್ರಕಾರವೇ ಇದೆ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ವಜಾಗೊಳಿಸಿದೆ.

Ad Widget . Ad Widget .

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

Leave a Comment

Your email address will not be published. Required fields are marked *