ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ

ಸಮಗ್ರ ನ್ಯೂಸ್: ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ 37 ವರ್ಷದ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಇವರು ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಲಿಯೊ ವರಾಡ್ಕರ್ ದಿಢೀರ್ ಪದತ್ಯಾಗ ಮಾಡಿದ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಆಯ್ಕೆಗೆ ಸಂಸತ್ತಿನಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸೈಮನ್ ಆಯ್ಕೆಯಾಗಿದ್ದಾರೆ.

. Ad Widget . Ad Widget

ಆರೋಗ್ಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಚಿವರಾಗಿ ಕೆಲಸ ಮಾಡಿರುವ ಸೈಮನ್, ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕಳೆದ ತಿಂಗಳು ಸೆಂಟರ್-ರೈಟ್ ಫೈನ್ ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

. Ad Widget . . Ad Widget . Ad Widget

ದೇಶ ಸೇವೆಗೆ ನನ್ನನ್ನು ಆಯ್ಕೆ ಮಾಡಿರುವ ಈ ನಿರ್ಧಾರ ಒಪ್ಪಿಕೊಳ್ಳುತ್ತೇನೆ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಗೌರವಿಸಲು ಬೇಕಾದ ಎಲ್ಲವನ್ನೂ ಮಾಡಲು ನಾನು ಬದ್ಧನಾಗಿದ್ದೇನೆ’ ಎಂದು ಅವರು ಸಂಸತ್ ಸದಸ್ಯರನ್ನು ಉದ್ದೇಶಿಸಿ ಹೇಳಿದ್ದಾರೆ.

Leave a Comment

Your email address will not be published. Required fields are marked *