Ad Widget .

ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.

Ad Widget . Ad Widget .

ಬೇಸಿಗೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣಾ ಸಮಯವನ್ನು ಈ ಮೊದಲು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೂ ನಿಗದಿಪಡಿಸಲಾಗಿತ್ತು. ಬಿಸಿಲು ಹೆಚ್ಚಾಗಿರುವುದರಿಂದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಏ.15 ರಿಂದ ಮೇ 10 ರವರೆಗೂ ರಾಜ್ಯಾದ್ಯಂತ ವಿಸ್ತರಿಸಲಾಗಿದೆ.

Ad Widget . Ad Widget .

ಅಂಗನವಾಡಿ ಸಿಬ್ಬಂದಿಗೆ ಮೇ 11 ರಿಂದ 26 ವರೆಗೂ ಬೇಸಿಗೆ ರಜೆ ನೀಡಲಾಗಿದೆ. ಮೇ 27 ರಿಂದ ಅಂಗನವಾಡಿಗಳು ಎಂದಿನಂತೆ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೂ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

Leave a Comment

Your email address will not be published. Required fields are marked *