Ad Widget .

ಧಾರವಾಡ: ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್‌ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Ad Widget . Ad Widget .

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Ad Widget . Ad Widget .

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೇ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಕೂಡಲೇ ಅವರ ವಿರುದ್ಧ ಸ್ವಯಂ ದೂರು ದಾಖಲು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Leave a Comment

Your email address will not be published. Required fields are marked *