ಸಮಗ್ರ ನ್ಯೂಸ್: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋ ಬಳಕೆ ಮಾಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಈಶ್ವರಪ್ಪ ಅವರು ಚುನಾವಣಾ ನರೇಂದ್ರ ಮೋದಿ ಪೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ, ದೂರು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ.
ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಈಶ್ವರಪ್ಪ ಮೋದಿ ಪೋಟೋ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನ ಬಳಸದಂತೆ ದೂರು ನೀಡಿದ್ದೇವೆ. ಈಶ್ವರಪ್ಪ ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ ಪಕ್ಷದ ಹೆಸರು ಭಾವಚಿತ್ರ ಬಳಸುವ ಅಧಿಕಾರ ಅವರಿಗೆ ಇರುವುದಿಲ್ಲ. ಈಶ್ವರಪ್ಪ ಹೀಗೆ ಮುಂದುವರೆದರೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.