Ad Widget .

ಲಕ್ನೋ:ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 500 ರೂ. ಮೊಬೈಲ್ ಡೇಟಾ ಉಚಿತ; ಅಖಿಲೇಶ್‌

ಸಮಗ್ರ ನ್ಯೂಸ್‌ : ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ ಉಚಿತವಾಗಿ 500 ರೂ. ಹಣವನ್ನು ಎಲ್ಲಾ ಬಿಪಿಎಲ್‌ ಪಡಿತರ ಕಾರ್ಡ್‌ ಹೊಂದಿದ ಗ್ರಾಹಕರಿಗೆ ನೀಡಲಾಗುವುದು ಎಂದು ಸಮಾಜವಾದಿ ಪಕ್ಷ ಹೇಳಿದೆ. ಎಸ್‌ಪಿ ಅಧ್ಯಕ್ಷ ಅಖಿಲೇಶ್‌ ಯಾದವ್‌ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

Ad Widget . Ad Widget .

ಈ ವೇಳೆ ಮಾತನಾಡಿದ ಅವರು ಉಚಿತ ಲ್ಯಾಪ್‌ಟಾಪ್ ನೀಡಿದ ನಂತರ ಸಮಾಜದಲ್ಲಿ ದೊಡ್ಡ ಬದಲಾವಣೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಏರಿದರೆ ಮೊಬೈಲ್‌ ಡೇಟಾಗೆ 500 ರೂ. ನೀಡಲಾಗುವುದು ಎಂದು ತಿಳಿಸಿದರು.

Ad Widget . Ad Widget .

2025ರ ಒಳಗಡೆ ಜಾತಿ ಆಧಾರಿತ ಸಮೀಕ್ಷೆ, ‘ಅಗ್ನಿಪಥ್‌’ ಯೋಜನೆ ರದ್ದು- ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿಯನ್ನು ಪರಿಚಯ, ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಸ್ವಾಮಿನಾಥನ್ ವರದಿಯಂತೆ ಕೃಷಿ ಬೆಳೆಗಳಿಗೆ ಎಂಎಸ್‌ಪಿ ಗೆ ಕಾನೂನು ಖಾತರಿ, ಅರೆಸೇನಾ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಹಳೆಯ ಪಿಂಚಣಿ ಯೋಜನೆ ಪ್ರಾರಂಭ, ಎಲ್ಲಾ ಭೂರಹಿತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾಸಿಕ 5,000 ರೂಪಾಯಿ ಪಿಂಚಣಿ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *