ಸಮಗ್ರ ನ್ಯೂಸ್ : ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.
ಬಾಲಕಿ ಮನೆ ಹೊರಗೆ ಆಟ ಆಡುತ್ತಿದ್ದಾಗ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜವಾಗದೆ 2.6 ವರ್ಷದ ತ್ರಿವೇಣಿ ಮೃತಪಟ್ಟಿದ್ದಾಳೆ.
ಮನೆ ಹೊರಗೆ ಆಟವಾಡುತ್ತಿದ್ದಾಗ ಬಾಲಕಿಗೆ ಎರಡು ಬಾರಿ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ತ್ರಿವೇಣಿ ಕೊನೆಯುಸಿರೆಳೆದಿದ್ದಾಳೆ.







