Ad Widget .

ಇಸ್ಲಾಮಾಬಾದ್: ಯಾತ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ|17 ಮಂದಿ ಮೃತ್ಯು, 41 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಯಾತ್ರಾರ್ಥಿಗಳು ಈದ್ ಅಲ್-ಫಿತರ್ ರಜೆಯ ಹಿನ್ನೆಲೆಯಲ್ಲಿ ನೈರುತ್ಯ ಪಾಕಿಸ್ತಾನದಲ್ಲಿರುವ ಧಾರ್ಮಿಕ ಕೇಂದ್ರವೊಂದಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ.

Ad Widget . Ad Widget .

17 ಯಾತ್ರಾರ್ಥಿಗಳು ಸಾವಿಗೀಡಾಗಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad Widget . Ad Widget .

ಟ್ರಕ್ ಮಿತಿಮೀರಿದ ವೇಗದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚಾಲಕ ಟ್ರಕ್ನಿಂದ ಜಿಗಿದಿದ್ದು, ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, 17 ಜನರ ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *