ಸಮಗ್ರ ನ್ಯೂಸ್ : ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಪಂಜಾಬ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಏರ್ ಕೂಲರ್, ಫ್ಯಾನ್ ಅಳವಡಿಸಲಾಗುತ್ತದೆ. ಜೊತೆಗೆ ಮತದಾರರಿಗೆ ನೀರು, ತಂಪು ಪಾನೀಯ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ ಎಂದು ಪಂಜಾಬ್‌ನ ಮುಖ್ಯ ಚುನಾವಣಾಧಿಕಾರಿ ಸಿಬಿನ್ ಸಿ. ಅವರು ಹೇಳಿದ್ದಾರೆ.
ಈ ವರ್ಷ ಪಂಜಾಬ್‌ನಲ್ಲಿ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮತದಾರರಿಗೆ ಕುಡಿಯುವ ನೀರು, ತಂಪು ಪಾನೀಯ ನೀಡಬೇಕು ಎಂದು ಚುನಾವಣಾ ಆಯೋಗವು ಕಳೆದ ತಿಂಗಳು ನಿರ್ದೇಶನ ನೀಡಿತ್ತು. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಆದೇಶಿಸಿದ್ದು, ಜೂನ್ 1ರಂದು ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.