Ad Widget .

ಪುತ್ತೂರು:ಮನೆ ಮನೆ ಮತದಾನ ಎ.14 ರಿಂದ 16ರ ತನಕ ನಡೆಯಲಿದೆ- ಜುಬಿನ್ ಮೊಹಪಾತ್ರ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 777 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಎ.14 ರಿಂದ 16ರ ತನಕ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

Ad Widget . Ad Widget .

ಈ ಹಿಂದೆ 85 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರಿಗೆ ಮನೆಯಲ್ಲೇ ಮತದಾನ ಮಾಡಲು ಅರ್ಜಿ ನಮೂನೆ ನೀಡಿದ್ದೆವು. ಈ ಅರ್ಜಿಯ ಮೂಲಕ ಅವರು ಮನೆಯಲ್ಲೇ ಅಥವಾ ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ತಮ್ಮ ಅಭಿಪ್ರಾಯ ಮಂಡಿಸಿದAತೆ ಮನೆಯಲ್ಲೇ ಮತದಾನ ಮಾಡುವ 85 ವರ್ಷ ಮೇಲ್ಪಟ್ಟವರು 777 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತ ಚಲಾಯಿಸುವ ಮನವಿ ಮಾಡಿದ್ದಾರೆ.

Ad Widget . Ad Widget .

ಈ ಮತದಾನ ಪ್ರಕ್ರಿಯೆಯು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೇತೃತ್ವದಲ್ಲಿ ನಡೆಯಲಿದೆ. ಅವರ ಕೆಳಗೆ ತಂಡವೊAದು ರಚನೆ ಮಾಡಲಾಗಿದೆ. ಆ ತಂಡ ಎಲ್ಲಾ ಅರ್ಹ ಮತದಾರರಿಗೆ ಕರೆ ಮಾಡಿ ಮತದಾನ ಪ್ರಕ್ರಿಯೆಗೆ ಮನೆಗೆ ಬರುವ ದಿನಾಂಕವನ್ನು ತಿಳಿಸುತ್ತಾರೆ. ಈ ಕುರಿತು ರಾಜಕೀಯ ಪಕ್ಷಗಳಿಗೂ ಎಷ್ಟು ಮಂದಿ ಮತದಾನ ಮಾಡುತ್ತಾರೆ ಮತ್ತು ಅವರ ಮತಪಟ್ಟಿಗಳ ಕುರಿತು ಮಾಹಿತಿ ನೀಡಲಾಗಿದೆ.

ಮನೆ ಮನೆ ಮತದಾನದಲ್ಲಿ ಜಿಲ್ಲಾಧಿಕಾರಿ ಅಂತದಲ್ಲಿ ನೇಮಕವಾಗಿರುವ ಪಿ.ಆರ್.ಒ, ಕ್ಯಾಮರ ಮ್ಯಾನ್, ಪೊಲೀಸರು, ಮೈಕ್ರೋ ಅಬ್ಸರರ್ ಅವರು ಭಾಗವಹಸಲಿದ್ದಾರೆ. ಅವರಿಗೆ ಯಾವ ರೀತಿ ಮತದಾನ ಪ್ರಕ್ರಿಯೆ ನಡೆಸಬೇಕೆಂದು ವಿವೇಕಾನಂದ ಶಾಲೆಯಲ್ಲಿ ತರಬೇತಿ ನಡೆಯುತ್ತಿದೆ. ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದೆ ಎಂದು ಹೇಳಿದರು.

ಎ.14ರಂದು ಬೆಳಿಗ್ಗೆ ಸೆಕ್ಟರ್ ಅಧಿಕಾರಿಗಳು ವಿವಿಧ ನಿಗದಿ ಮಾಡಿದ ರೂಟ್‌ಗಳಲ್ಲಿ ತೆರಳಲಿದ್ದಾರೆ. ಯಾವ ಬೂತ್‌ಗೆ ಪ್ರಥಮ ಯಾವ ಬೂತ್‌ಗೆ ಕೊನೆಗೆ ಹೋಗಬೇಕೆಂದು ಪಟ್ಟಿ ಮಾಡಿದಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಬೆಳಿಗ್ಗೆ ಗಂಟೆ 8 ರಿಂದ ಸಂಜೆ ಗಂಟೆ 6ರ ತನಕ ಮತದಾನ ಪ್ರಕ್ರಿಯೆ ನಡೆಯಲಿದೆ.

ಒಟ್ಟು 20 ಸೆಕ್ಟರ್ ಅಧಿಕಾರಿಗಳು, 20 ರೂಟ್ಸ್ಗಳಿಗೆ ತೆರಳಲಿದ್ದಾರೆ. ಒಳಮೊಗ್ರು, ಕುರಿಯ, ಅರಿಯಡ್ಕ ಭಾಗದಲ್ಲಿ 85 ವರ್ಷ ಮೇಲ್ಪಟ್ಟವರು 85 ಮಂದಿ ಇದ್ದಾರೆ. ರೂಟ್ ನಂಬರ್ 1 ರಲ್ಲಿ 85 ವರ್ಷ ಮೇಲ್ಪಟ್ಟ ಅತೀ ಕಡಿಮೆ 35 ಮಂದಿ ಮತದಾರರಿದ್ದಾರೆ. 100 ವರ್ಷಕ್ಕಿಂತ ಮೇಲ್ಪಟ್ಟವರು 16 ಮಂದಿ ಇದ್ದಾರೆ. ಅದರಲ್ಲಿ ಅತಿ ಹಿರಿಯರಾದ 109 ವರ್ಷದವರೂ ಮತದಾನ ಮಾಡಲಿದ್ದಾರೆ. ಕೆಲವು ಕಡೆ ಹಿರಿಯರು ಮೃತಪಟ್ಟಿದ್ದರೆ ಅಲ್ಲಿ ಮಹಾಜರು ಮಾಡಲಾಗುತ್ತದೆ ಎಂದು ಎ.ಸಿ ಜುಬಿನ್ ಮೊಹಪಾತ್ರ ಅವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ತಹಸೀಲ್ದಾರ್ ಕುಂಞ ಅಹಮ್ಮದ್, ಚುನಾವಣಾ ನೋಡೆಲ್ ಅಧಿಕಾರಿಯಾಗಿರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹನುಮ ರೆಡ್ಡಿ, ಹಿರಿಯ ನೋಡೆಲ್ ಅಧಿಕಾರಿ ಶಿವಶಂಕರ್ ದಾನೆಗೊಂಡ, ಉಪತಹಶೀಲ್ದಾರ್ ಸುಲೋಚನಾ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *