ಸಮಗ್ರ ಉದ್ಯೋಗ:ಆಗ್ನೇಯ ಮಧ್ಯ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಹುದ್ದೆಯ ಮಾಹಿತಿ:
ಕಾರ್ಪೆಂಟರ್- 38
COPA- 100
ಡ್ರಾಫ್ಟ್ಸ್ಮ್ಯಾನ್- 10
ಎಲೆಕ್ಟ್ರಿಷಿಯನ್- 137
ಎಲೆಕ್ಟ್ರಿಷಿಯನ್ (ಮೆಕ್ಯಾನಿಕ್)- 5
ಫಿಟ್ಟರ್- 187
ಮೆಷಿನಿಸ್ಟ್- 4
ಪೈಂಟರ್- 42
ಪ್ಲಂಬರ್- 25
ಮೆಕ್ಯಾನಿಕ್(RAC)- 15
SMW- 4
ಸ್ಟೆನೊ(ಇಂಗ್ಲಿಷ್)- 27
ಸ್ಟೆನೊ (ಹಿಂದಿ)- 19
ಡೀಸೆಲ್ ಮೆಕ್ಯಾನಿಕ್- 12
ಟರ್ನರ್- 4
ವೆಲ್ಡರ್- 4
ವೈರ್ಮ್ಯಾನ್- 80
ಕಾಮಿಕಲ್ ಲ್ಯಾಬೊರೇಟರಿ ಅಸಿಸ್ಟೆಂಟ್- 4
ಡಿಜಿಟಲ್ ಫೋಟೋಗ್ರಾಫರ್- 2
ವಿದ್ಯಾರ್ಹತೆ:
ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಛತ್ತೀಸ್ಗಢದ ಬಿಲಸ್ಪುರ
ವೇತನ:
ನಿಗದಿಪಡಿಸಿಲ್ಲ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಶಾರ್ಟ್ಲಿಸ್ಟಿಂಗ್
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.