ಸಮಗ್ರ ಉದ್ಯೋಗ: ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್ಕ್ರಾಫ್ಟ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 2, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.500/-
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ವೇತನ:
ಮಾಸಿಕ ₹ 27,940
ಉದ್ಯೋಗದ ಸ್ಥಳ:
ಬೆಂಗಳೂರು
ಹೈದರಾಬಾದ್
ಚೆನ್ನೈ
ಆಯ್ಕೆ ಪ್ರಕ್ರಿಯೆ:
ಪ್ರಿಲಿಮಿನರಿ ಸ್ಕ್ರೀನಿಂಗ್
ಟೆಕ್ನಿಕಲ್ ಅಸೆಸ್ಮೆಂಟ್
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಚೆನ್ನೈ: DGM (Engg) ಕಚೇರಿ, AIESL, ಹೊಸ ಇಂಟಿಗ್ರೇಟೆಡ್ ಸರ್ವೀಸ್ ಕಾಂಪ್ಲೆಕ್ಸ್, ಮೀನಂಬಾಕ್ಕಂ, ಚೆನ್ನೈ.
ಬೆಂಗಳೂರು: ಏರ್ ಇಂಡಿಯಾ ಕಾನ್ಫರೆನ್ಸ್ ಕೊಠಡಿ, 2 ನೇ ಮಹಡಿ, ಆಲ್ಫಾ -3, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು.
ಹೈದರಾಬಾದ್: AIESL MRO, ಗೇಟ್ ನಂ.3 ಹತ್ತಿರ, ಶಂಶಾಬಾದ್, ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಹೈದರಾಬಾದ್.