ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಇಂದಿನಿಂದ ಅವಕಾಶ ಲಭ್ಯವಿದೆ. ನಾಮನಿರ್ದೇಶನ ಸಲ್ಲಿಕೆ ಮಾಡಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ.

Ad Widget ... ..

ರಾಜ್ಯಾದ್ಯಂತ ಒಟ್ಟು 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Ad Widget

Leave a Comment

Your email address will not be published. Required fields are marked *