Ad Widget .

ಇರಾನ್-ಇಸ್ರೇಲ್ ಯುದ್ಧ ಸಾಧ್ಯತೆ/ ಎರಡು ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ

ಸಮಗ್ರ ನ್ಯೂಸ್; ಮುಂದಿನ 48 ಗಂಟೆಗಳಲ್ಲಿ ಇರಾನ್- ಇಸ್ರೇಲ್ ಮೇಲೆ ದಾಳಿ ನಡೆಸುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ಇರಾನ್ ಮತ್ತು ಇಸ್ರೇಲ್‍ಗೆ ಪ್ರಯಾಣಿಸುವುದನ್ನು ನಿಲ್ಲಿಸುವಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

Ad Widget . Ad Widget .

ಪ್ರಸ್ತುತ ಇರಾನ್ ಅಥವಾ ಇಸ್ರೇಲ್‍ನಲ್ಲಿ ನೆಲೆಸಿರುವ ಭಾರತೀಯರು ಅಲ್ಲಿನ ಭಾರತೀಯ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ತಮ್ಮನ್ನು ನೋಂದಾಯಿಸಿಕೊಳ್ಳುವಂತೆ ಸಚಿವಾಲಯ ತಿಳಿಸಿದೆ. ಸುರಕ್ಷತೆ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಓಡಾಟ ಕನಿಷ್ಠ ಮಟ್ಟಕ್ಕೆ ನಿಬರ್ಂಧಿಸಲು ವಿನಂತಿಸಲಾಗಿದೆ.

Ad Widget . Ad Widget .

ಮುಂದಿನ 48 ಗಂಟೆಗಳಲ್ಲಿ ಇರಾನ್ ಇಸ್ರೇಲ್ ಮೇಲೆ ನೇರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇರಾನ್ ನಾಯಕತ್ವದಿಂದ ಮಾಹಿತಿ ಪಡೆದ ವ್ಯಕ್ತಿಯನ್ನು ಉಲ್ಲೇಖಿಸಿ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

Leave a Comment

Your email address will not be published. Required fields are marked *