ಮಂಗಳೂರು: ನೀರು ಸೇದುವ ವೇಳೆ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

ಸಮಗ್ರ ನ್ಯೂಸ್‌ : ಬಾವಿಯಿಂದ ನೀರು ಸೇದುವ ವೇಳೆ ಆಯಾ ತಪ್ಪಿದ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.

Ad Widget ... ..

ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ (58) ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ.ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.

Ad Widget

ಕಾರ್ಯಾಚರಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಚಂದ್ರಹಾಸ ಸಾಲಿಯಾನ್, ಸಿಬ್ಬಂದಿಗಳಾದ ದಯಾಕರ, ಪುನೀತ್, ಶಿವರಾಜ್, ಪವನ್ ಕುಮಾರ್ ಭಾಗವಹಿಸಿದ್ದರು.

Leave a Comment

Your email address will not be published. Required fields are marked *