Ad Widget .

ಮಂಗಳೂರು: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್‌ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಏಪ್ರಿಲ್‌ ೧೧ ರಂದು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಪುನಃ ಸ್ಥಳ ಪರಿಶೀಲನೆ ಮಾಡಿದ್ದಾರೆ.

Ad Widget . Ad Widget .

ಇಂದು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪೆರ್ಲಯ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ,ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ ,ಕಣಚೂರು, ಯೆನೆಪೋಯ,ಇಂಡಿಯಾನ,ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Ad Widget . Ad Widget .

ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು, ಹೊರರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ.

Leave a Comment

Your email address will not be published. Required fields are marked *