Ad Widget .

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ & ಡೈಮಂಡ್ ವಶಕ್ಕೆ ಪಡೆಯಲಾಗಿದೆ.

Ad Widget . Ad Widget .

ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ. ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

Ad Widget . Ad Widget .

ಕಳೆದ ಏ. 6, 9 ದಿನಾಂಕದ ಹಳೆಯ ಬಿಲ್‌ಗಳು ಲಭ್ಯವಾಗಿವೆ. ಆಭರಣ ಸಾಗಾಟಕ್ಕೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಚುನಾವಣಾ ಅಧಿಕಾರಿ ರೇಣುಕಾ, ಕಮರ್ಷಿಯಲ್ ಟ್ಯಾಕ್ಸ್‌ ಇಲಾಖೆಯ ಉಪ ಆಯುಕ್ತ ಮಂಜುನಾಥ್ ನೇತೃತ್ವದಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *