ಸಮಗ್ರ ನ್ಯೂಸ್ : ನೇಣು ಬಿಗಿದುಕೊಂಡು ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪೊಲೀಸ್ ಕ್ವಾಟ್ರಸ್ನಲ್ಲಿ ನಡೆದಿದೆ.
ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಹೆಡ್ ಕಾನ್ಸ್ಟೇಬಲ್.
ಡಿ.ಎ.ಆರ್ನಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನೂ ನಾಗರಾಜ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.