Ad Widget

ತೆಲುಗು ನಟ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್‌ : ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವನ್ನು ವಿಶ್ವವಿದ್ಯಾಲಯ ನೀಡುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಅವರು ಹೊಸ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಆ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಜೊತೆಗಿನ ಚಿತ್ರೀಕರಣದ ಫೋಟೋಗಳನ್ನು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. .

Ad Widget . Ad Widget . Ad Widget .

ರಾಮ್ ಚರಣ್- ಜಾನ್ವಿ ಕಪೂರ್ ನಟನೆಯ ಹೊಸ ಚಿತ್ರಕ್ಕೆ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನೆರವೇರಿದೆ. ಈ ಇವೆಂಟ್‌ಗೆ ಮೆಗಾಸ್ಟಾರ್ ಚಿರಂಜೀವಿ, ಬೋನಿ ಕಪೂರ್, ಸುಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಅಂದಹಾಗೆ, ರಾಮ್‌ಚರಣ್ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತ ಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

Leave a Comment

Your email address will not be published. Required fields are marked *