Ad Widget .

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ/ ಮತ್ತಿಬ್ಬರು ಎನ್‍ಐಎ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತರನ್ನು ಬಂಧಿಸಿದ್ದಾರೆ.

Ad Widget . Ad Widget .

ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರನ್ನು ಎನ್‍ಐಎ ಬಂಧಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಎನ್‍ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾಜ್ ಮುನೀರ್ ಕೃತ್ಯ ಬಲವಾಗಿದ್ದು, ಈತ ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾನೆ.

Ad Widget . Ad Widget .

ತಲೆಮರೆಸಿಕೊಂಡಿರುವ ಶಂಕಿತರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎನ್‍ಐಎ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

Leave a Comment

Your email address will not be published. Required fields are marked *