ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

. Ad Widget . Ad Widget

ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು. KA 28 D 1021 ಸಂಖ್ಯೆಯ ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಗೆ ದೇವಸ್ಥಾನಕ್ಕೆ ಹೊರಟಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *