Ad Widget .

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

Ad Widget . Ad Widget .

ರಾಮಣ್ಣ ಶೆಟ್ಟಿ ಪಾರ್ಕ್ ನಿಂದ ಮೆರವಣಿಗೆ ಆರಂಭವಾಯಿತು. ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ ಮೆರವಣಿಗೆಯಲ್ಲಿ ಸಾಗಿಬಂದ ಈಶ್ವರಪ್ಪ ಬೆಂಬಲಿಗರು ಕೇಸರಿ ಧ್ವಜಗಳನ್ನು ಪ್ರದರ್ಶಿಸಿದರು. ಜೈ ಶ್ರೀರಾಮ್, ಭಾರತ ಮಾತಾಕಿ ಜೈ, ರಾಷ್ಟಭಕ್ತರ ಬಳಗದ ಅಭ್ಯರ್ಥಿ ಈಶ್ವರಪ್ಪನವರಿಗೆ ಜೈ ಎಂಬ ಘೋಷಣೆಗಳನ್ನು ಕೂಗಿದರು.

Ad Widget . Ad Widget .

ಉರಿ ಬಿಸಿಲಿನಲ್ಲಿ ನಾಮಪತ್ರ ಸಲ್ಲಿಕೆಗೆ ತೆರೆದ ವಾಹನದಲ್ಲಿ ಹೊರಟ ಈಶ್ವರಪ್ಪನವರ ಮೆರವಣಿಗೆಗೆ ವಾದ್ಯ ಮೇಳ ರಂಗು ತುಂಬಿತು. ಈ ವೇಳೆ ಬೆಂಬಲಿಗರು ಹೂವಿನ ಮಳೆ ಸುರಿಸಿದರು.

ಮೆರವಣಿಗೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದವರಿಗೆ ಮಜ್ಜಿಗೆ, ನಿಂಬೆ ಹುಳಿ ಪೆಪ್ಪರ್ ಮೆಂಟ್, ನೀರಿನ ಪ್ಯಾಕೆಟ್ ಹಂಚಲಾಯಿತು.

Leave a Comment

Your email address will not be published. Required fields are marked *