Ad Widget

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

Ad Widget . Ad Widget . Ad Widget . Ad Widget . Ad Widget . Ad Widget

ಚಾಮರಾಜನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಾನು ಮತ್ತು ನನ್ನ ಮಗ ಇಬ್ಬರೂ ಉಪಸ್ಥಿತರಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದರು. ರಾಜ್ಯಕ್ಕೆ ಬರಪರಿಹಾರ ಹಾಗೂ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ.

Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ಹಾದಿಯಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಭಾರತ್ ರೈಸ್‌ಗೆ ಕಡಿಮೆ ದರದಲ್ಲಿ ಅಕ್ಕಿಯನ್ನು ನೀಡಿದರು ಎಂದು ಟೀಕಿಸಿದರು. ರಾಜ್ಯಗಳಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಾದಾಗ ಅದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿರುತ್ತದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಸಾಕಷ್ಟು ಅನುದಾನ ಮೀಸಲಿಟ್ಟಿದೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಂಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಪಟ್ಟಭದ್ರ ಹಿತಾಸಕ್ತಿಗಳು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸಂವಿಧಾನ ಉಳಿಯಲಾರದು ಎಂಬ ಆತಂಕ ಕಾಡುತ್ತಿದೆ. ಮಹಾತ್ಮ ಗಾಂಧೀಜಿ ಅವರ ಸಿದ್ಧಾಂತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರು ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

Leave a Comment

Your email address will not be published. Required fields are marked *