Ad Widget .

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್‌ : ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ.

Ad Widget . Ad Widget .

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಹೊನ್ನೇಗೌಡನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಹಠಾತ್ತನೆ ಕಾಣಿಸಿಕೊಂಡ ಹುಲಿ ಆತಂಕ ಸೃಷ್ಟಿ ಮಾಡಿತ್ತು. ಹುಲಿಯನ್ನ ಕಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡುವ ವೇಳೆಗಾಗಲೇ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಕಾಲ್ಕಿತ್ತಿತ್ತು,

Ad Widget . Ad Widget .

ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪತ್ತೆ ಕಾರ್ಯಕ್ಕೆ ಮುಂದಾದ ಸಂದರ್ಭದಲ್ಲಿ ಪಕ್ಕದ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಮನು ಎಂಬ ಯುವಕನ ಮೇಲೆ ಎಗರಿದ ಹುಲಿಯು ಕೈ ಮತ್ತು ಕುತ್ತಿಗೆಗೆ ಬಲವಾಗಿ ಗಾಯಗೊಳಿಸಿದೆ, ಜನರ ಕಿರುಚಾಟ ಕೇಳಿ ಮತ್ತೆ ಬಾಳೆತೋಟದಲ್ಲಿ ಮರೆಯಾದ ವ್ಯಾಘ್ರನ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಸಲಾಗಿದ್ದು ಹುಲಿ ದಾಳಿಗೆ ತುತ್ತಾಗಿ ಗಾಯಗೊಂಡಿರುವ ಯುವಕನನ್ನ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Leave a Comment

Your email address will not be published. Required fields are marked *