ಸಮಗ್ರ ನ್ಯೂಸ್: ರಾಜ್ಯದ ಜನತೆ ಬಿರುಬಿಸಿಲಿನಿಂದ ಬೇಸತ್ತು ಹೋಗಿದ್ದರು. ಆದರೆ ಶುಕ್ರವಾರ ವರುಣದೇವ ತಂಪೆರೆದಿದ್ದಾನೆ. ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ ಅದರಂತೆ ಮಳೆಯಾಗಿದೆ. ಅಷ್ಟೇ ಅಲ್ಲದೆ ಒಂದು ದಿನ ಸುರಿದ ಮಳೆಗೆ ಅನಾಹುತಗಳು ಸಂಭವಿಸಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಅಸುನಿಗಿದ್ದಾರೆ. ತಾಂಬಾ ಗ್ರಾಮದ ನಿವಾಸಿ ಭಾರತಿ ಕೆಂಗನಾಳ(40) ಮೃತ ರ್ದುದೈವಿ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳಿಕಟ್ಟಿಯಲ್ಲಿ 10 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿದೆ. ಇನ್ನೂ ದಾವಣಗೆರೆಯಲ್ಲಿ ಮಳೆಗೆ ಸಂತಸ ವ್ಯಕ್ತವಾಗಿದೆ ಅದರೊಂದಿಗೆ ಗಾಳಿಗೆ ಮನೆಯ ಹೆಂಚುಗಳು ಹಾರಿ ಹೋಗಿವೆ.
ಬೆಳಗಾವಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಸುರಿದ ಮಳೆ ಸುರಿದಿದ್ದು, ನಗರದ ಭೋವಿ ಗಲ್ಲಿಯಲ್ಲಿ ಮಳೆ ನೀರು ಮಳಿಗೆಗಳಿಗೆ ನುಗ್ಗಿದೆ. ಇದರಿಂದ ಮಳೆ ನೀರು ಮಳಿಗೆಗಳ ಒಳಗೆ ಹೋಗದಂತೆ ತಡೆಯಲು ಹರಸಾಹಸ ಪಡುವಂತಾಗಿದೆ.