Ad Widget .

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.

Ad Widget . Ad Widget .

ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ. ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕು. ಉನ್ನತ ಮಟ್ಟಕ್ಕೆ ನಗರವನ್ನು ಅಭಿವೃದ್ಧಿ ಪಡಿಸಬೇಕು. ನಗರಸಭೆಯನ್ನು ಅಭಿವೃದ್ಧಿ ಪಡಿಸುವ ಅನಿವಾರ್ಯವಾಗಿದೆ. ನಮ್ಮ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿಗೆ ಪಣ ತೊಟ್ಟಿದ್ದೇವೆ. ಮನೆ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ತಿಳಿಸಬೇಕು.

Ad Widget . Ad Widget .

ಬಿಜೆಪಿಯವರು ದೇಶದಲ್ಲಿ ಬಡವರನ್ನು ಬಿಟ್ಟು ಧರ್ಮ ದೇವರನ್ನು ಇಟ್ಟುಕೊಂಡು, ಪೊಳ್ಳು ಸುಳ್ಳಿನ ಭರವಸೆ ನೀಡಿದ್ದಾರೆ ಅಷ್ಟೇ, ಅಭಿವೃದ್ಧಿ ಪಡಿಸದೆ ಸುಳ್ಳು ಮಾತಿನಿಂದ ದೇಶ ಅಭಿವೃದ್ಧಿಪಡಿಸಿದ್ದೇವೆ ಎಂದು ಹೇಳುತ್ತಿದ್ದಾರೆ . ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಗೆಲುವಿಗೆ ಶ್ರಮಿಸಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಉಸ್ತುವಾರಿ ಶ್ರೀಕಂಠ ಮುಖಂಡರಾದ ಇಂಧನ ಬಾಬು, ಬುಲೆಟ್ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *