ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ

ಸಮಗ್ರ ನ್ಯೂಸ್‌ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿದ್ದಾರೆ.

Ad Widget ... ..

ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಳಿಕ ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿದ ಬೊಮ್ಮಾಯಿ, ಧಾರವಾಡದ ಮುರುಘಾಮಠಕ್ಕೆ ಅನಿರೀಕ್ಷಿತ ಭೇಟಿ ನೀಡಿ ಮೃತ್ಯುಂಜಯಪ್ಪಗಳ ದರ್ಶನ ಪಡೆದರು.

Ad Widget

ಅಲ್ಲದೇ, ಮುರುಘಾಮಠದ ಪೀಠಾಧಿಪತಿ ಡಾ.ಮಲ್ಲಿಕಾರ್ಜುನ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Leave a Comment

Your email address will not be published. Required fields are marked *