ಇಬ್ಬರು ಮಕ್ಕಳನ್ನು ಸಾಯಿಸಿದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈಕೆ ಜೈಲಿಗೆ ಹೋದ ದಿನವೇ ಶೌಚಾಲಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ad Widget ... ..

ಈಕೆ ಎಪ್ರಿಲ್ 9 ರಂದು ರಾತ್ರಿ ಇಬ್ಬರು ಮಕ್ಕಳನ್ನು ತಲೆದಿಂಬುವಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಳು, ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ, ತಾನು ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಗಂಗಾದೇವಿಯನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಗುರುವಾರ ರಾತ್ರಿ ಜೈಲಿನಲ್ಲೇ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೆನ್ನೆ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

ಇವರು ಆಂಧ್ರಪ್ರದೇಶ ಮೂಲದವರು, ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂದು ವಾಸವಿದ್ದರು. ಈಕೆಯ ಗಂಡ ಖಾಸಗಿ ಕಂಪೆನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ, ಆದರೆ ಪೋಕ್ಸೋ ಕೇಸ್ ನಲ್ಲಿ ಈತ ಜೈಲಿನಲ್ಲಿದ್ದಾನೆ. ಇವರ ಕೌಟುಂಬಿಕ ಕಲಹಕ್ಕೆ ಬೇಸತ್ತು ಈ ರೀತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *