Ad Widget .

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

Ad Widget . Ad Widget .

ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ದೂರು ಸಲ್ಲಿಸಿತು.

Ad Widget . Ad Widget .

ಎಸ್, ಸುರೇಶ್ ಕುಮಾರ್ ಅವರು ಮಾತನಾಡಿ ಕೊಳ್ಳೇಗಾಲದಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿದ್ದಾರೆ. ಮೋದಿ ಅವರು ಸರ್ವಾಧಿಕಾರಿ ಎಂದಿದ್ದಾರೆ. ಮೋದಿ ಅವರ ನಾಯಕತ್ವದಡಿ ಸಂವಿಧಾನ ಅಪಾಯದಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ತಿಳಿಸಿದರು. ಈ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು. ಇನ್ನೂ ಮುಂದೆ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹಿಸಿದೆ.

Leave a Comment

Your email address will not be published. Required fields are marked *