Ad Widget .

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಹಿನ್ನೆಲೆ ಇಂದು ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ. ಹಣ, ಸಮಯ ಉಳಿಸುವ ದಿಸೆಯಲ್ಲಿ ದೇಶಾದ್ಯಂತ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸುವ ಚಿಂತನೆಗಳು ಮುನ್ನೆಲೆಗೆ ಬರುತ್ತಿವೆ. ಇದರ ಬೆನ್ನಲ್ಲೇ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ತಜ್ಞರ ಸಮಿತಿ ರಚಿಸಿ, ಸಮಿತಿಯ ಶಿಫಾರಸುಗಳೊಂದಿಗೆ ಒಂದು ದೇಶ, ಒಂದು ಚುನಾವಣೆ ಯೋಜನೆ ಜಾರಿಗೊಳಿಸಲಾಗುವುದು ಎಂಬುದಾಗಿ ಬಿಜೆಪಿಯು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

Ad Widget . Ad Widget . Ad Widget .

ವಿಶ್ವಸಂಸ್ಥೆಯ ಕಾಯಂ ಸದಸ್ಯ ರಾಷ್ಟ್ರಗಳ ಸಾಲಿಗೆ ಭಾರತವನ್ನೂ ಸೇರಿಸಲು ಶ್ರಮಿಸಲಾಗುವುದು ಎಂಬುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇನ್ನೂ ಪ್ರಮುಖವಾಗಿ

  • ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ
    ಪೈಪ್‌ಲೈನ್‌ ಮೂಲಕ ಅಡುಗೆ ಅನಿಲ ಪೂರೈಕೆ
  • ಕೋಟ್ಯಂತರ ಕುಟುಂಬಗಳಿಗೆ ಸೋಲಾರ್‌ ಮೂಲಕ ಉಚಿತವಾಗಿ ವಿದ್ಯುತ್‌ ಪೂರೈಕೆ
  • ಮುದ್ರಾ ಯೋಜನೆ ಅಡಿಯಲ್ಲಿ ಸಿಗುವ ಸಾಲದ ಮೊತ್ತ 20 ಲಕ್ಷ ರೂ.ಗೆ ಏರಿಕೆ
  • ಅಮೃತ್‌ ಭಾರತ್‌, ವಂದೇ ಭಾರತ್‌ ರೈಲುಗಳ ಸಂಖ್ಯೆ ಹೆಚ್ಚಳ
  • ಮಂಗಳಮುಖಿಯರಿಗೂ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ ಉಚಿತ ಚಿಕಿತ್ಸೆ
  • 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ
  • ಮೂರು ಕೋಟಿ ಮಹಿಳೆಯರಿಗೆ ಲಕ್‌ಪತಿ ದೀದಿ ಯೋಜನೆಯ ಗ್ಯಾರಂಟಿ
  • ರೈತರಿಗೆ ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ
  • ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು
  • ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ
  • ತಮಿಳು ಭಾಷೆಯ ವೈಶಿಷ್ಟ್ಯ ಸಾರಲು ಆದ್ಯತೆ
    ಉದ್ಯೋಗ ಖಾತರಿ
  • 2036 ರಲ್ಲಿ ಒಲಿಂಪಿಕ್ಸ್ ಆತಿಥ್ಯ
    3 ಕೋಟಿ ಲಕ್​ಪತಿ ದೀದಿ ಮಾಡುವ ಗುರಿ
  • ಮಹಿಳಾ ಮೀಸಲಾತಿ ಜಾರಿಗೊಳಿಸುವ ಭರವಸೆ
  • ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು
    ಮೀನುಗಾರರಿಗೆ ಯೋಜನೆ
  • ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನ
  • 2025 ಬುಡಕಟ್ಟು ಹೆಮ್ಮೆಯ ವರ್ಷ
  • ಪ್ರತಿ ಕ್ಷೇತ್ರದಲ್ಲೂ ಒಬಿಸಿ-ಎಸ್‌ಸಿ-ಎಸ್‌ಟಿಗೆ ಗೌರವ
  • ಜಾಗತಿಕ ಉತ್ಪಾದನಾ ಕೇಂದ್ರ ರಚಿಸಲು ಸಿದ್ಧತೆ
  • ಪ್ರಪಂಚದಾದ್ಯಂತ ರಾಮಾಯಣ ಹಬ್ಬ
  • ಅಯೋಧ್ಯೆಯ ಅಭಿವೃದ್ಧಿ
  • ಈಶಾನ್ಯ ಭಾರತದ ಅಭಿವೃದ್ಧಿ
  • AI, ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ವಲಯದಲ್ಲಿ ಅಭಿವೃದ್ಧಿ

ಹಾಗೇ ಇನ್ನುಮುಂದೆ 70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ವಯಸ್ಸಾದಂತೆ ಕಾಯಿಲೆಗಳು ಕೂಡ ಹೆಚ್ಚು ಹೀಗಾಗಿ ಇನ್ನುಮುಂದೆ ವೃದ್ಧರು ಚಿಂತಿಸಬೇಕಿಲ್ಲ, 70 ವರ್ಷ ಮೇಲ್ಪಟ್ಟವರೂ ಕೂಡ ಇನ್ನುಮುಂದೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಮೋದಿ ಅಭಯ ನೀಡಿದ್ದಾರೆ. ಅದರೊಂದಿಗೆ ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ ಮಾಡಲಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಬಿಜೆಪಿ ಪ್ರಣಾಳಿಕೆ ಕುರಿತು ನರೇಂದ್ರ ಮೋದಿ ಮಾತನಾಡಿ. “ಡಾ.ಬಿ.ಆರ್.ಅಂಬೇಡ್ಕರ್‌ ಅವರ ಜಯಂತಿಯಂದೇ ಪ್ರಣಾಳಿಕೆ ಬಿಡುಗಡೆ ಮಾಡಿರುವುದು ಸಂತಸ ತಂದಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *