ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು

ಸಮಗ್ರ ನ್ಯೂಸ್‌ : ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ರಾತ್ರಿ 7.45ರಿಂದ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಮತ ಯಾಚಿಸಲಿದ್ದಾರೆ. ಪ್ರಧಾನಿ ಭಾಗವಹಿಸುವ ಈ ಕಾರ್ಯಕ್ರಮದ ಸಲುವಾಗಿ ನಗರದೆಲ್ಲೆಡೆ ಬಿಗು ಭದ್ರತೆ ಏರ್ಪಡಿಸಲಾಗಿದೆ.

Ad Widget ... ..

ಬ್ರಹ್ಮಶ್ರೀ ನಾರಾಯಣಗುರು ವೃತ್ತರಿಂದ ಆರಂಭವಾಗಲಿರುವ ರೋಡ್‌ ಶೋ ಲಾಲ್‌ಬಾಗ್‌, ಪಿವಿಎಸ್‌ ವೃತ್ತದ ಮೂಲಕ ಸಾಗಿ ನವಭಾರತ ವೃತ್ತದಲ್ಲಿ ಸಮಾಪನಗೊಳ್ಳಲಿದೆ.

Ad Widget

ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ರೋಡ್‌ ಶೋ ಆರಂಭಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮೋದಿ ಅವರಿಗೆ ಕಡೆಗೋಲು ಕೃಷ್ಣನ ಮೂರ್ತಿಯನ್ನು ಉಡುಗೊರೆ ನೀಡಲು ಇಲ್ಲಿನ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಸುಮಾರು 2000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಈ ರೋಡ್‌ ಶೋ ಭದ್ರತೆಗಾಗಿ ನಿಯೊಜಿಸಲಾಗಿದೆ. ಉನ್ನತ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿದ್ದು ಭದ್ರತಾ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.ನಗರದ ಪ್ರಮುಖ ವೃತ್ತಗಳ ಬಳಿಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ರೋಡ್‌ ಶೋ ಸಾಗಲಿರುವ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯಿಂದಲೇ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಮಾರ್ಗವನ್ನು ಸೇರಿಕೊಳ್ಳುವ ಕೆಲವು ರಸ್ತೆಗಳಲ್ಲಿ ಒಂದು ಪಾರ್ಶ್ವದಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದರಿಂದಾಗಿ ಕೆಲ ಸಾರ್ವಜನಿಕರು ಸುತ್ತುಬಳಸಿ ಸಾಗಬೇಕಾಗಿದೆ. ನಗರದಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಸಿಟಿ ಬಸ್‌ಗಳ ಸಂಚಾರ ಕಡಿಮೆಯಾಗಿದೆ.

Leave a Comment

Your email address will not be published. Required fields are marked *