Ad Widget .

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ

ಸಮಗ್ರ ನ್ಯೂಸ್‌ : ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಟನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ.ಅಂಬೇಡ್ಕ‌ರ್ ಅವರ 133ನೇ ಜನ್ಮದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾ ನಾಯಕ ಜೈ ಭೀಮ್ ರ್ಯಾಲಿಯನ್ನು ಏಪ್ರಿಲ್ 14ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಹಾಗೂ ಹಿರಿಯ ಚಿಂತಕ ಪ್ರೊ.ಫಣಿರಾಜ್ ತಿಳಿಸಿದ್ದಾರೆ.

Ad Widget . Ad Widget .

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರಿನಿಂದ ಹೊರಡುವ ರ್ಯಾಲಿಯು ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಕಾಪು ಮಾರ್ಗವಾಗಿ ಉಡುಪಿಯಲ್ಲಿ ಸಮಾಪ್ತಿಗೊಳ್ಳಲಿದೆ. ಬೆಳಗ್ಗೆ 9ಗಂಟೆಗೆ ರ್ಯಾಲಿಗೆ ಬೈಂದೂರು ಶ್ರೀಸೇನೇಶ್ವರ ದೇವಸ್ಥಾನದ ಎದುರು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಚಾಲನೆ ನೀಡಲಿದ್ದಾರೆ ಎಂದರು.

Ad Widget . Ad Widget .

ಬೆಳಿಗ್ಗೆ 11ಗಂಟೆಗೆ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಡೆಯುವ ರ್ಯಾಲಿಯಲ್ಲಿ ಪ್ರಗತಿಪರ ಚಿಂತಕ ಪ್ರೊ.ಫಣಿರಾಜ್‌, ಮಧ್ಯಾಹ್ನ 12ಗಂಟೆಗೆ ಬ್ರಹ್ಮಾವರ ಅಂಬೇಡ್ಕ‌ರ್ ವೃತ್ತದಲ್ಲಿ ಕುಂದಾಪುರ ಸಹಬಾಳ್ವೆಯ ರಾಮಕೃಷ್ಣ ಹೇರ್ಳೆ, ಮಧ್ಯಾಹ್ನ 1.30ಕ್ಕೆ ಹೆಬ್ರಿ ಬಸ್ ನಿಲ್ದಾಣದಲ್ಲಿ ದಸಂಸ ಮುಖಂಡ ಟಿ.ಮಂಜುನಾಥ ಗಿಳಿಯಾರು, 3 ಗಂಟೆಗೆ ಕಾರ್ಕಳ ಬಸ್‌ ನಿಲ್ದಾಣದಲ್ಲಿ ಪತ್ರಕರ್ತ ಶಶಿಧರ ಹೆಮ್ಮಾಡಿ, ಸಂಜೆ 5ಗಂಟೆಗೆ ಕಾಪು ಬಸ್ ನಿಲ್ದಾಣದಲ್ಲಿ ಉಪನ್ಯಾಸಕ ಜಯ ಪ್ರಕಾಶ್ ಶೆಟ್ಟಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಅಂದು ಸಂಜೆ 6.30ಕ್ಕೆ ಉಡುಪಿ ಹುತಾತ್ಮರ ಸ್ಮಾರಕದ ಬಳಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ.ಎಚ್.ಎಸ್.ಅನುಪಮ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು‌ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ಸುಂದರ್ ಮಾಸ್ಟರ್, ಟಿ. ಮಂಜುನಾಥ ಗಿಳಿಯಾರು, ವಾಸುದೇವ ಮೂದೂರು, ಶ್ಯಾಂ ಸುಂದರ್ ತೆಕ್ಕಟ್ಟೆ, ಮಂಜುನಾಥ ಬಾಳ್ಕುದ್ರು, ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ, ಸಲಾವುದ್ದೀನ್, ಇದ್ರೀಸ್ ಹೂಡೆ ಉಪಸ್ಥಿತರಿದ್ದರು

Leave a Comment

Your email address will not be published. Required fields are marked *