Ad Widget .

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು

ಸಮಗ್ರ ನ್ಯೂಸ್‌ : ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ.

Ad Widget . Ad Widget .

ಕಲಬುರಗಿ ಪ್ರವಾಸ ಮುಗಿಸಿಕೊಂಡು ಸಂಜೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಖರ್ಗೆ ಅವರು ಪ್ರಚಾರ ಮಾಡುವವರಿದ್ದರು. ಆದರೆ, ಅನಾರೋಗ್ಯದಿಂದ ಅವರ ಪ್ರವಾಸ ರದ್ದಾಗಿದೆ.

Ad Widget . Ad Widget .

ಡಿಹೈಡ್ರೇಶನ್ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆಯವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಅವರು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ದಿನ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಪತ್ರಕರ್ತರಿಗೆ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು ಏ. 17 ರಂದು ನಾಮಪತ್ರ ಸಲ್ಲಿಸುವರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯದ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು

Leave a Comment

Your email address will not be published. Required fields are marked *