ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು (ಎ.15) ಬೆಳಿಗ್ಗೆ 6.45 ಕ್ಕೆ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ.

Ad Widget ... ..

ಅಯ್ಯಮಾಡ ಮಾದಯ್ಯ(ಬೊಗ್ಗ) (63) ಅವರು ಮೃತಪಟ್ಟಿದ್ದಾರೆ. ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ . ರೈತರು ಕಾಫಿ, ಬೆಳೆಗಾರರು, ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ. ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡ ಅಜ್ಜಮಾಡ ಚಂಗಪ್ಪ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *