Ad Widget .

ಅಮರಾವತಿ : ಬೈಕ್ಗೆ ಡಿಕ್ಕಿ ಹೊಡೆದು 18 ಕಿ.ಮೀ ಸವಾರನ ಶವ ಎಳೆದೊಯ್ದ ಕಾರು ಚಾಲಕ

ಸಮಗ್ರ ನ್ಯೂಸ್‌ : ಕಾರು ಚಾಲಕನೊಬ್ಬ ಬೈಕ್ಗೆ ಡಿಕ್ಕಿ ಹೊಡೆದು ಬರೋಬ್ಬರಿ 18 ಕಿಲೋ. ಮೀಟರ್ ದೂರಕ್ಕೆ ಬೈಕ್‌ ಸವಾರನನ್ನು ಎಳೆದೊಯ್ದು ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

Ad Widget . Ad Widget .

ಯರ್ರಿಸ್ವಾಮಿ ಮೃತ ಬೈಕ್ ಸವಾರ.ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಕಾರಿನ ಬಾನೆಟ್‌ ಮೇಲಿದ್ದ ಬಿದ್ದಿದ್ದಾನೆ.

Ad Widget . Ad Widget .

ಆದರೆ ಇದನ್ನು ಗಮನಿಸದ ಕಾರು ಚಾಲಕ 18 ಕಿಲೋ. ಮೀಟರ್ನಷ್ಟು ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಚಲಿಸುತ್ತಿದ್ದ ಟೊಯೊಟಾ ಇನ್ನೋವಾ ಕಾರಿನ ಮೇಲೆ ಶವ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತಕ್ಷಣವೇ ದಾವಿಸಿದ ಅಧಿಕಾರಿಗಳು ವಾಹನವನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಮೃತ ಬೈಕ್ ಸವಾರರನ್ನು ಯರ್ರಿಸ್ವಾಮಿ ಎಂದು ಗುರುತಿಸಿದ್ದಾರೆ. ಕೂಡಲೇ ಸ್ಥಳದಿಂದ ಕಾರು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *