ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ತೆರಳಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ಗೆ ಎದೆ ನೋವು ಕಾಣಿಸಿಕೊಂಡಿದೆ. ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು..
ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ, ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ಬೆಳಗ್ಗೆ ಒಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಿತ್ತು. ಇಸಿಜಿ, ಎಕೋ ಎಲ್ಲಾ ನಾರ್ಮಲ್ ಇದೆ. ಕೆಲ ಹೊತ್ತಿನ ಬಳಿಕ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗಿ ಆಗುತ್ತೇನೆ ಎಂದು ಹೇಳಿದರು.