ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶದ ನಂತರ ಆ ಜಾಗದಲ್ಲಿ ಕಸ ಹೆಕ್ಕುವ ಮೂಲಕ ಯದುವೀರ್ ದಂಪತಿ ಗಮನ ಸೆಳೆದಿದ್ದಾರೆ.

Ad Widget ... ..

ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಭಾಷಣ ಮಾಡಿದ್ದು, ಕಾರ್ಯಕ್ರಮದಲ್ಲಿ ಒಟ್ಟಾರೆ ಅರವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಮೈಸೂರು ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಿದ್ದರು.

Ad Widget

ಜನರು ಸೇರಿದ್ದ ವೇಳೆ ನೀರಿನ ಬಾಟಲಿಗಳು, ತಿಂಡಿ ಕವರ್‍ಗಳು ಹೀಗೆ ಸಾಕಷ್ಟು ಕಸ ಸಂಗ್ರಹವಾಗಿತ್ತು. ಮಹಾರಾಜ ಕಾಲೇಜು ಮೈದಾನದಲ್ಲಿ ಇತರ ಕಾರ್ಯಕರ್ತರ ಜತೆ ಸಾಮಾನ್ಯರಲ್ಲಿ ಸಾಮಾನ್ಯರಂತೆಯೇ ಯದುವೀರ್ ಹಾಗೂ ತ್ರಿಷಿಕಾ ಕುಮಾರಿ ಸಿಂಗ್ ದಂಪತಿ ಶುಚಿತ್ವ ಕಾರ್ಯದಲ್ಲಿ ಭಾಗಿಯಾದರು.

Leave a Comment

Your email address will not be published. Required fields are marked *