ಸಮಗ್ರ ನ್ಯೂಸ್: ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಲವು ಖ್ಯಾತ ನಟರೊಂದಿಗೆ ನಟಿಸಿರುವ ದ್ವಾರಕೀಶ್ ಅವರು ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.