ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು, ಅಲ್ಲಿನ ಸಿಇಒ ಮತ್ತು ಮ್ಯಾನೇಜ್ಮೆಂಟ್ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು.
ಖಾಸಗಿ ಕಂಪನಿಗಳ ಮಾಲಿಕರನ್ನು ಭೇಟಿ ಮಾಡಿ ಮತದಾನ ಮಾಡುವಂತೆ ಸಿಬ್ಬಂದಿಗಳಿಗೆ ಉತ್ತೇಜಿಸುವುದಲ್ಲದೆ, ಸಾಧ್ಯವಾದರೆ ಅವರಿಗೆ ಮತಗಟ್ಟೆಗಳಿಗೆ ತೆರಳಲು ವಾಹನದ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದೇವೆ. ವರ್ಕ್ ಫ್ರಾಮ್ ಹೋಮ್ ಮಾಡುವಂತೆ ಕಂಪನಿಗಳು ಸಿಬ್ಬಂದಿಗೆ ಹೇಳುವಂತಿಲ್ಲ. ಕಡ್ಡಾಯವಾಗಿ ರಜೆ ನೀಡಲೇಬೇಕು. ಒಂದು ವೇಳೆ ರಜೆ ನೀಡದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಾಗೆ ರಜಾ ತಗೊಂಡು ಓಟ್ ಹಾಕದೆ ಮಜಾ ಮಾಡೊರನ್ನ ವಜಾ ಮಾಡೊ ಕ್ರಮನು ಬರಬೇಕು 👍