ಲೋಕಸಭಾ ಚುನಾವಣೆ/ ಸಕ್ಕರೆ ನಾಡಲ್ಲಿ ಕುಮಾರಸ್ವಾಮಿ ಪ್ರಚಾರ ಶುರು

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಅಖಾಡಕ್ಕಿಳಿದಿದ್ದಾರೆ. ಮಂಡ್ಯದಲ್ಲಿ ಇಂದಿನಿಂದ ಚುನಾವಣಾ ಸಭೆ ನಡೆಸುವ ಮೂಲಕ ಎಚ್‍ಡಿಕೆ ಮತ ಯಾಚನೆ ಮಾಡುತ್ತಿದ್ದಾರೆ.

Ad Widget ... ..

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಅವರು ಸಚಿವರು, ಸಂಸದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಗ್ರಾಮಗಳಲ್ಲಿ ಸುಡು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಪ್ರಚಾರ ನಡೆಸಿದರು.

Ad Widget

ಇದೇ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಷ್ಟು ದಿನ ಮೌನ ವಹಿಸಿದ್ದರು, ಇಂದಿನಿಂದ ಮಂಡ್ಯ ಕ್ಷೇತ್ರದಲ್ಲಿ ಮತ ಹುಡುಕಾಟ ಆರಂಭಿಸಿದ್ದಾರೆ. ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.

Leave a Comment

Your email address will not be published. Required fields are marked *