ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ರಾಜ್ಯದಾದ್ಯಂತ ಅಲ್ಲಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದು ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ.

Ad Widget ... ..

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಎಟಿಎಂಗೆ ಹಣ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಾಹನ ಪರಿಶೀಲನೆ ಮಾಡಿದ್ದು, ಬಂದೂಕು ಸಹಿತ ಸೆಕ್ಯೂರಿಟಿ ಗಾರ್ಡ್ ಇಲ್ಲದೆ ಹಣ ಸಾಗಿಸುತ್ತಿರುವುದು ಪತ್ತೆ ಆಗಿದೆ. ಅನುಮಾನಗೊಂಡು ಪರಿಶೀಲಿಸಿದಾಗ ದಾಖಲೆ ಇಲ್ಲದ ಹಣ ಪತ್ತೆ ಆಗಿದ್ದು, ಹಣದ ಬಗ್ಗೆ ಚುನಾವಣಾ ಆಯೋಗ ಮತ್ತು ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

Ad Widget

Leave a Comment

Your email address will not be published. Required fields are marked *