ಸಮಗ್ರ ನ್ಯೂಸ್: ನಿನ್ನೆ ತುಮಕೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಅವರಿದ್ದ ವೇದಿಕೆಗೆ ನುಗ್ಗಿ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ ಕಾರ್ಯಕರ್ತೆಯರು, ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ನಡೆಯುತ್ತಿದ್ದ ಮೈತ್ರಿ ಸಮಾವೇಶದಲ್ಲಿ ಕಾರ್ಯಕರ್ತೆಯರ ಸೋಗಿನಲ್ಲಿ ಬಂದು ಸಭೆಯಲ್ಲಿ ಕೂತಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿಯವರು, ಗ್ಯಾರಂಟಿಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಖಂಡನೀಯ ಎಂದು ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಕಾರ್ಯಕರ್ತೆಯರು ಘೋಷಣೆ ಕೂಗಿದರು. ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಇನ್ನೂ ಈ ವಿಚಾರವಾಗಿ ಮೈತ್ರಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಮಾಜಿ ಪ್ರಧಾನಿಗಳಿಗೆ ಇದು ಅವಮಾನ ಮಾಡಿದಂತಾಗಿದೆ. ಪ್ರಧಾನಿಯವರಿಗೆ ಯಾವುದೇ ರೀತಿಯ ಭದ್ರತೆಯನ್ನು ಪೊಲೀಸರು ನೀಡಲಿಲ್ಲ, ಪೊಲೀಸರು ಈಗಿನ ಸರ್ಕಾರದ ಪರ ಇರುವವರು ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.