ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ, ನಟ ಪವನ್ ಕಲ್ಯಾಣ್ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಅಬ್ಬರ ಜೋರಾಗಿ ನಡೆಯುತ್ತಿದೆ. ಆಯಾ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ನಾಯಕರು, ಸಿನಿಮಾ ಹೀರೋಗಳು ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ, ಖ್ಯಾತ ನಟ ಪವನ್ ಕಲ್ಯಾಣ್‌ ಎಂಟ್ರಿ ಕೊಡಲಿದ್ದಾರೆ.

Ad Widget ... ..

ನಾಳೆ ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಕೋಲಾರಕ್ಕೆ ಆಗಮಿಸಲಿದ್ದು, ಅಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

Ad Widget

ಇತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಬಳ್ಳಾಪುರ, ರಾಯಚೂರು, ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್‌ ಕಲ್ಯಾಣ್‌ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಕರ್ನಾಟಕದಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳಿದ್ದು ಈ ಪ್ರಚಾರ ಅಭಿಮಾನಿಗಳಿಗೆ ಯಾವ ರೀತಿ ತಲುಪಲಿದೆ ನೋಡಬೇಕು.

Leave a Comment

Your email address will not be published. Required fields are marked *