Ad Widget .

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Ad Widget . Ad Widget .

ಜೆಎನ್‌ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad Widget . Ad Widget .

ವಿಶ್ವವಿದ್ಯಾಲಯದ ಉಪಕುಲಪತಿಗಳು ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ ಏಪ್ರಿಲ್ 16ರಂದು ತರಗತಿ ಬಹಿಷ್ಕರಿಸಿ ಸಂಪೂರ್ಣ ವಿಶ್ವವಿದ್ಯಾಲಯದ ನಡೆಸಲಾಗುವುದು ಎಂದು ಶನಿವಾರವೇ ಜೆಎನ್‌ಯುಎಸ್‌ಯು ತಿಳಿಸಿತ್ತು.

ಸದ್ಯ ರದ್ದು ಮಾಡಲಾಗಿರುವ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಪುನರ್ ಸ್ಥಾಪನೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳುವ ಎಲ್ಲ ಸಮಿತಿಗಳಲ್ಲಿ ಜೆಎನ್‌ಯುಎಸ್‌ಯು ಸೇರ್ಪಡೆಯ ಬೇಡಿಕೆಯನ್ನೂ ವಿದ್ಯಾರ್ಥಿ ಸಂಘಟನೆ ಮುಂದಿಟ್ಟಿದೆ.

Leave a Comment

Your email address will not be published. Required fields are marked *