ಸಮಗ್ರ ನ್ಯೂಸ್ : ದೇಶದ ಭವಿಷ್ಯವನ್ನು ಸದೃಢಗೊಳಿಸುವ ಹಾಗೂ ಯುವಪೀಳಿಗೆಯನ್ನು ಜಾತ್ಯಾತೀತವಾಗಿ ಸಮಾಜದಲ್ಲಿ ಮುಂಚೂಣಿಗೆ ತರುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಅವರು ನಗರದ ನಿರಂತರ ಸಮುದಾಯ ಭವನದಲ್ಲಿ ಚುನಾವಣಾ ವಾರಂ ರೂಂ.ಗೆ ಭೇಟಿ ನೀಡಿ ಮಾತನಾಡಿದ ಅವರು ಯುವಕರನ್ನು ಉದ್ಯೋಗವಂತರನ್ನಾಗಿ ನಿರ್ಮಾಣ ಮಾಡುತ್ತೇವೆಂದು ಕೇಂದ್ರ ಸರ್ಕಾರ ಸುಳ್ಳನೇ ಹೇಳಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ದೂರಿದರು.
ಕಳೆದ ಹತ್ತು ವರ್ಷಗಳಿಂದ ಕೇಂದ್ರದಿಂದ ಜನಸಾಮಾನ್ಯರಿಗೆ ಬೆಲೆಏರಿಕೆ ಸಂಕಷ್ಟಗಳೇ ಎದುರಾಗುತ್ತಿವೆ. ಪೆಟ್ರೋಲ್, ಅಡುಗೆ ಅನಿಲ, ದಿನೋಪಯೋಗಿ ವಸ್ತುಗಳು ಗಗನಕ್ಕೇರಿರುವುದನ್ನು ಮನಗಂಡು ರಾಜ್ಯ ಸರ್ಕಾರ ಜನತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಸಹಾಯಹಸ್ತ ಕಲ್ಪಿಸುತ್ತಿದೆ ಎಂದು ಹೇಳಿದರು.
ಪ್ರಸ್ತುತ ಐದು ಶಾಸಕರನ್ನು ಒಳಗೊಂಡಿರುವ ಜಿಲ್ಲೆ ಚಿಕ್ಕಮಗಳೂರು. ಮುಖ್ಯವಾಗಿ ಸಿ.ಟಿ.ರವಿ ಮಣಿಸಿದ ತಮ್ಮಯ್ಯರನ್ನು ಮರೆಯಲಾಗದು. ಅಲ್ಲದೇ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಸುಳಿವೇ ಇರಲಿಲ್ಲ. ಆದರೆ ರಾಹುಲ್‌ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ನಾಯಕತ್ವದಲ್ಲಿ ಅಧಿಕಾರ ಪಡೆದಿರುವುದು ಸಾಮಾನ್ಯ ವಿಚಾರವಲ್ಲ. ರಾಜ್ಯದಲ್ಲಿ ಸುಮಾರು ೧.೬೫ ಕೋಟಿ ಮನೆಗಳಿಗೆ ಉಚಿತ ವಿದ್ಯುತ್, ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಿದೆ. ಉಚಿತ ಅಕ್ಕಿ ವಿತರಣೆಯಲ್ಲೂ ಮಾತನ್ನು ತಪ್ಪದೇ ಪ್ರಾಮಾಣಿಕವಾಗಿ ನಡೆದುಕೊಂಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರ. ಬಡವರ ಅಕ್ಕಿಯನ್ನು ನೀಡದೇ ನಾಟಕವಾಡುತ್ತಿರುವುದು ಕೇಂದ್ರ ಸರ್ಕಾರ ಎಂಬುದನ್ನು ಅರಿಯಬೇಕಿದೆ ಎಂದರು.
ದೇಶದಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯಲಿಚ್ಚಿಸುವ ನಿಟ್ಟಿನಲ್ಲಿ ಯುವಕರು ಅತಿಹೆಚ್ಚು ಸಂಖ್ಯೆಯಲ್ಲಿ ಬೆಂಬಲಿ ಸಬೇಕು. ಪ್ರಸ್ತುತ ವಾರಂ ರೂಂ.ನಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವಜನಾಂಗಕ್ಕೆ ಚುನಾವಣಾ ಬಳಿಕ ಮತ್ತೊ ಮ್ಮೆ ಭೇಟಿ ಮಾಡಿ ದನ್ಯವಾದ ಸಲ್ಲಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕರಾವಳಿ ಪ್ರದೇಶವರಾದ ಕಾರಣ ಎರಡು ಜಿಲ್ಲೆಗಳಿಗೂ ಸೇರಿ ಚಿಕ್ಕಮಗಳೂರಿನಲ್ಲಿ ಚುನಾವಣಾ ವಾರಂ ರೂಂ. ನಿರ್ಮಾಣಗೊಂಡಿದೆ. ಒಟ್ಟಾರೆ ಜಿಲ್ಲೆಗಳಿಂದ ೧೮ ಬ್ಲಾಕ್‌ಗಳಿಗೆ ಸಂಪರ್ಕವನ್ನು ಹೊಂದಲಿದೆ ಎಂದು ತಿಳಿಸಿದರು.
ವಾರಂ ರೂಂ.ನಲ್ಲಿ ಕಾರ್ಯನಿರ್ವಹಿಸುವ ಯುವಕರು ಪ್ರತಿ ಬೂತ್ ಅಧ್ಯಕ್ಷರಿಗೆ ಕರೆಮಾಡಿ ಗ್ಯಾರಂಟಿ ಕಾರ್ಡ್ ತಲುಪಿದೆ, ವಾಟ್ಸಪ್ ಗ್ರೂಪ್ ರಚನೆಗೊಂಡಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಕಲೆಹಾಕುವರು. ಯುವತಿಯರು ಗೃಹಲಕ್ಷ್ಮೀ ಯೋಜನೆಯ ಮಹಿಳೆಯರಿಗೆ ಕರೆಮಾಡಿ ಸೌಲಭ್ಯ ಸದ್ಬಳಕೆಯಾಗಿದೆ ಹಾಗೂ ಅಭ್ಯ ರ್ಥಿ ಪರ ಪ್ರಚಾರ ಕೈಗೊಳ್ಳುವರು ಎಂದರು.
ಎರಡು ಕ್ಷೇತ್ರಗಳಲ್ಲೂ ಗ್ಯಾರಂಟಿ ಕಾರ್ಡ್‌ಗಳನ್ನು ತಲುಪಿದ ಬಳಿಕ ಸ್ವವಿವರದ ಮಾಹಿತಿಯನ್ನು ಸಂಗ್ರಹಿಸಿ ಕೆಪಿಸಿಸಿ ಕಚೇರಿಗೆ ಕಳಿಸಿಕೊಡಲಾಗುವುದು. ಆ ನಿಟ್ಟಿನಲ್ಲಿ ವಾರಂ ರೂಂ. ಕಂಪ್ಯೂಟರೀಕರಣಗೊಳಿಸಿ ಮಾಹಿತಿಯ ನ್ನು ಸಂಗ್ರಹಿಸುವ ಕಾರ್ಯಕ್ಕೆ ಕೈಹಾಕಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ಶಾಸಕ ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್, ಮುಖಂಡರುಗಳಾದ ಬಿ.ಹೆಚ್.ಹರೀಶ್, ನಯಾಜ್, ಶ್ರೀಕಾಂತ್, ಪ್ರದೀಪ್, ಅನ್ಸರ್ ಆಲಿ, ಕೆ.ಭರತ್ ಮತ್ತಿತರರು ಹಾಜರಿದ್ದರು.