ಸಮಗ್ರ ನ್ಯೂಸ್ : ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ.
ರಣದೀಪ್ ಸುರ್ಜೇವಾಲಾ ಅವರು ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ಈ ಕ್ರಮ ತೆಗೆದುಕೊಂಡಿದೆ.
ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಸಾರ್ವಜನಿಕ ಸಭೆಗಳನ್ನು ನಡೆಸಲು ನಿಷೇಧ ಹೇರಲಾಗಿದೆ.
ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನಡೆಸದಂತೆ ರಣದೀಪ್ ಸುರ್ಜೆವಾಲಾ ಅವರನ್ನು ನಿರ್ಬಂಧಿಸುತ್ತದೆ ಎಂದು ಚುನಾವಣಾ ಸಮಿತಿಯು ತನ್ನ ನೋಟಿಸ್ನಲ್ಲಿ ಮಾಹಿತಿ ನೀಡಿದೆ.