ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದ ಪರಿಣಾಮ ಏಳು ಜನರಿಗೆ ಗಾಯವಾಗಿ ಓರ್ವ ಬ್ರಿಡ್ಜ್ ಕಾಮಗಾರಿ ಸಾಮಗ್ರಿಗಳ ಮಧ್ಯೆ ಸಿಲುಕಿ ಗಂಭೀರ ಗಾಯವಾದ ಘಟನೆ ನಡೆದಿದೆ.

Ad Widget ... ..

ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದ್ದು, ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *