Ad Widget .

ಬಿಜೆಪಿ ಸೇರಿದ ಅಖಂಡ ಶ್ರೀನಿವಾಸ ಮೂರ್ತಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಅಖಂಡ ಶ್ರೀನಿವಾಸ ಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಟಿಕೆಟ್ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ಪುಲಿಕೇಶಿನಗರ ಜಿಲ್ಲೆಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.

Ad Widget . Ad Widget .

ಯಡಿಯೂರಪ್ಪ ಅವರು ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Ad Widget . Ad Widget .

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರಿ ನಮಗೆ ದೊಡ್ಡ ಶಕ್ತಿ ತಂದಿದ್ದಾರೆ. ಅವರು ಎರಡೂವರೆಯಿಂದ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಅಖಂಡ ಚುನಾವಣೆ ಸಮಯದಲ್ಲಿ ಬಂದಿರೋದ್ರಿಂದ ಶೋಭಾ ಅವರು ದೊಡ್ಡ ಅಂತರದಲ್ಲಿ ಗೆಲ್ಲಲು ಅನುಕೂಲ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *