Ad Widget .

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ

ಸಮಗ್ರ ನ್ಯೂಸ್‌ : ಸಿದ್ದಾರೂಢ ಶ್ರೀಗಳು ಉತ್ತರ ಕರ್ನಾಟಕದ ಆರಾಧ್ಯ ದೈವ. ಸಿದ್ದಾರೂಢ ಶ್ರೀಗಳನ್ನು ನೆನೆಯದೆ ಈ ಭಾಗದ ಜನರು ಯಾವುದೇ ಕಾರ್ಯಗಳನ್ನು ನಡೆಸುವುದಿಲ್ಲ. ಅಂತಹ ಮಹಾಪುರುಷ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

Ad Widget . Ad Widget .

ಸಿದ್ಧಾರೂಢ ಶ್ರೀಗಳ 188 ನೇ ಜಯಂತಿ ಹಿನ್ನೆಲೆಯಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.

Ad Widget . Ad Widget .

ಸದ್ಗುರು ಶ್ರೀ ಸಿದ್ದಾರೂಢ ಶ್ರೀಗಳಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ ಸಾಮರಸ್ಯ ಮತ್ತು ವಂಚಿತರ ಸಬಲೀಕರಣಕ್ಕೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರ ಜೀವನ ಮತ್ತು ಕಾರ್ಯಗಳು ಎಲ್ಲಾ ಜೀವಿಗಳ ಕಲ್ಯಾಣಕ್ಕೆ ಗಾಢವಾದ ಬದ್ಧತೆಗೆ ನಿದರ್ಶನವಾಗಿವೆ. ಅವರು ಯಾವಾಗಲೂ ಏಕತೆ ಮತ್ತು ದಯೆಯ ಮಹತ್ವವನ್ನು ಎತ್ತಿ ತೋರಿಸಿದರು. ಅವರ ಆದರ್ಶಗಳನ್ನು ಈಡೇರಿಸಲು ನಾವು ಸದಾ ಶ್ರಮಿಸುತ್ತೇವೆ ಎಂದು ತಮ್ಮ ಅಧಿಕೃತ “ಎಕ್ಸ್” ಖಾತೆಯಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *