ಸಮಗ್ರ ನ್ಯೂಸ್: ಚುನಾವಣೆಗೆ ಇನ್ನೇನೂ ದಿನಗಣನೆ ಬಾಕಿ ಇದೇ ಇದೇ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು (ಎ.17) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನ ಇತ್ತು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿ, ಅವರಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಭರವಸೆಯನ್ನೂ ನೀಡಲಾಗಿತ್ತು. ಕೊನೆಗೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಾಗಿ ಸಂಗಣ್ಣ ಕರಡಿ ಒಪ್ಪಿಕೊಂಡಿದ್ದರು.
ಅದರೆ ಈಗ ಸಂಗಣ್ಣ ಕರಡಿ ತಮ್ಮ ಮನಸ್ಸನ್ನು ಬದಲಾಯಿಸಿದ್ದರು. ಇತ್ತೀಚೆಗೆ ಕೆಲವು ಕಾಂಗ್ರೆಸ್ ಮುಖಂಡರು ಅವರನ್ನು ಸಂಪರ್ಕ ಮಾಡಿದ್ದರು. ಈ ವೇಳೆ ಕೆಲವು ಸುತ್ತಿನ ಚರ್ಚೆಗಳು ಸಹ ನಡೆದಿವೆ. ಹೀಗಾಗಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ತಮ್ಮ ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇ- ಮೇಲ್ ಮೂಲಕ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.